ಲಂಚದ ಕೋಟೆಗೊಂದು ಸಣ್ಣ ಪೆಟ್ಟು

ದೂರದ ದೆಹಲಿಯಲ್ಲಿರುವ ವೈಲಾಯ ದಂಪತಿಗಳು ನನ್ನ ಪತ್ನಿಯ ಹತ್ತಿರದ ಬಂಧುಗಳು. ಅವರ ಇಬ್ಬರು ಗಂಡು ಮಕ್ಕಳೂ ಅಮೆರಿಕಾದಲ್ಲಿದ್ದಾರೆ. ಹಾಗಾಗಿ ವೈಲಾಯ ದಂಪತಿಗಳು ಮತ್ತೆ ಮತ್ತೆ ಅಮೆರಿಕಕ್ಕೆ ಹೋಗಿ ಬರುತ್ತಿರುತ್ತಾರೆ. ಇತ್ತೀಚಿಗೆ ಮುಂಬಯಿಯಲ್ಲಿ ಉಗ್ರರ ದಾಳಿ ನಡೆದ ನಂತರ ಅಂತರರಾಷ್ಟ್ರೀಯ ಪ್ರಯಾಣಿಕರ ದಾಖಲೆಗಳನ್ನು ತಪಾಸಣಾಧಿಕಾರಿಗಳು ತುಂಬಾ ಕಟ್ಟುನಿಟ್ಟಾಗಿ ಪರಿಶೀಲಿಸುತ್ತಿದ್ದಾರಂತೆ. ವೈಲಾಯರ ಪತ್ನಿ ಬಿ.ಸಿ.ರೋಡಿನವರು. ಅವರ ಜನನ ದಾಖಲೆಯನ್ನು ಪಕ್ಕಾ ಮಾಡಿಕೊಳ್ಳುವ ಉದ್ದೇಶದಿಂದ ವೈಲಾಯರು ನಮಗೆ ಒಂದು ಪತ್ರ ಬರೆದು, “ತಾಲೂಕು ಆಫಿಸಿನಿಂದ ಈ ದಾಖಲೆಯನ್ನು ಪಡೆದು ಕಳಿಸಲು ಸಾಧ್ಯವೇ?’

Read more