ಮಂಗಳೂರು ವಿಶೇಷ ಆರ್ಥಿಕವಲಯಕ್ಕೆ ನೀರೆಲ್ಲಿಂದ?

ಮಂಗಳೂರಿನಲ್ಲಿ ವಿಶೇಷ ಆರ್ಥಿಕವಲಯ ಸ್ಥಾಪನೆಯಾಗುತ್ತಿದೆ. ಈ ವಲಯದಲ್ಲಿ ಹಲವು ಕೈಗಾರಿಕೆಗಳು ಕಾರ್ಯಾರಂಭ ಮಾಡಲಿವೆಯಂತೆ; ಹಲವು ದೇಶೀ – ವಿದೇಶೀ ಕಂಪೆನಿಗಳು ತಳವೂರಲಿವೆಯಂತೆ; ಮಂಗಳೂರಿನ ಯುವಜನತೆಗೆ ಉದ್ಯೋಗ ನೀಡಲು ಈ ಕಂಪೆನಿಗಳು ಸ್ಪರ್ಧೆ ನಡೆಸಲಿವೆಯಂತೆ. ಇನ್ನೇನು ನಮ್ಮೂರಿನ ಯುವಜನತೆ ಯಾವ ಕೊಲ್ಲಿರಾಷ್ಟ್ರಕ್ಕೂ ಹೋಗಬೇಕಿಲ್ಲ, ಯಾವ ಅಮೆರಿಕಕ್ಕೂ ಹೋಗಬೇಕಿಲ್ಲ. ಅಷ್ಟೇಕೆ ಉದ್ಯೋಗ ಹುಡುಕಿ ಬೆಂಗಳೂರಿಗೂ ಹೋಗಬೇಕಿಲ್ಲ. ಕಾಲುಬುಡದಲ್ಲೇ ಕೇಳಿದ ಉದ್ಯೋಗ! ತಿಂಗಳಿಗೆ ಎಪ್ಪತ್ತು ಎಂಬತ್ತು ಸಾವಿರ ಸಂಬಳ ಲೆಕ್ಕಕ್ಕೇ ಅಲ್ಲವಂತೆ. ಅಷ್ಟು ಕೊಟ್ಟರೂ ಕೆಲಸಕ್ಕೆ ಜನ ಸಿಗದೆ ಹೋಗುವ ಕಾಲ

Read more