ಮಂಗಳೂರು ವಿಶೇಷ ಆರ್ಥಿಕ ವಲಯಕ್ಕೆ ನೀರು: ಮಾಹಿತಿ ಸಂಗ್ರಹದ ಒದ್ದಾಟ-ಗುದ್ದಾಟ- ಭಾಗ ೨

ಕಾರ್ಪೋರೇಟ್ ಕಂಪೆನಿಗಳು ತಮ್ಮ ಕೆಲಸವನ್ನು ತುಂಬಾ ವ್ಯವಸ್ಥಿತವಾಗಿಯೂ, ನಿಖರವಾಗಿಯೂ ಮಾಡುತ್ತವೆ, ಖಚಿತವಾದ ಪೂರ್ವ ಲೆಕ್ಕಾಚಾರ ಇಲ್ಲದೆ ಯಾವ ವ್ಯವಹಾರಕ್ಕೂ ಮುಂದುವರಿಯುವುದಿಲ್ಲ ಎಂದೆಲ್ಲ ನಾನು ಭಾವಿಸಿದ್ದೆ. ಆದರೆ ಮಂಗಳೂರು ವಿಶೇಷ ಆರ್ಥಿಕ ವಲಯ ಕಂಪೆನಿಯು ನನ್ನ ನಂಬಿಕೆ ಬುಡಭದ್ರವಿಲ್ಲದ್ದು ಎಂದು ಸಾಧಿಸಿ ತೋರಿಸಿದೆ.ಹಿಂದಿನ ನನ್ನ ಲೇಖನದಲ್ಲಿ ಎಂ ಎಸ್ ಇ ಝಡ್ ವಿರುದ್ಧ ಮಾಹಿತಿ ಹಕ್ಕು ಆಯುಕ್ತರಿಗೆ ದೂರು ಸಲ್ಲಿಸಿದ ವಿಷಯ ಹೇಳಿದ್ದೆ. ತಾ. ೧೭-೧೨-೨೦೦೯ರಂದು ಕಂಪೆನಿ ನಾನು ಕೇಳಿದ ಮೂರು ಮಾಹಿತಿಗಳಲ್ಲಿ ಎರಡನ್ನು ಕೊಟ್ಟು, ಕೊಳಚೆ ನೀರು … Read more

ಮಂಗಳೂರು ವಿಶೇಷ ಆರ್ಥಿಕ ವಲಯಕ್ಕೆ ನೀರು: ಮಾಹಿತಿ ಸಂಗ್ರಹದ ಒದ್ದಾಟ-ಗುದ್ದಾಟ

ಈ ಕುರಿತಾದ ನನ್ನ ಮೊದಲಿನ ಲೇಖನಕ್ಕೆ ಎಂ ಎಸ್ ಇ ಝಡ್ ತಾ. ೬-೧೦-೦೯ರ ಉದಯವಾಣಿಯಲ್ಲಿ ಪ್ರಕಟಿಸಿದ ಜಾಹೀರಾತನ್ನು ಆಧಾರವಾಗಿ ಇಟ್ಟುಕೊಂಡಿದ್ದೆ. ನನ್ನ ವಿಶ್ಲೇಷಣೆಯ ದೋಷಗಳು ನನಗೆ ತಿಳಿಯುವುದಿಲ್ಲ. ಹಾಗಾಗಿ, ಕಂಪೆನಿ ಯಾವ ಅಧ್ಯಯನವನ್ನು ಆಧರಿಸಿ ಈ ಅಂಕಿ ಅಂಶಗಳನ್ನು, ಮಾಹಿತಿಯನ್ನು ಪ್ರಕಟಿಸಿದೆ ಎಂದು ತಿಳಿಯುವ ಕುತೂಹಲದಿಂದ, ಮಾಹಿತಿ ಹಕ್ಕನ್ನು ಬಳಸಿ ಎಂ ಎಸ್ ಇ ಝಡ್ ಗೆ ಅರ್ಜಿ ಹಾಕಿ ಈ ಮೂರು ಮಾಹಿತಿಗಳನ್ನು ಕೇಳಿದ್ದೆ:೧. ಮಂಗಳೂರು ಮಹಾನಗರ ಪಾಲಿಕೆಯ ಕೊಳಚೆ ನೀರು ಸಂಸ್ಕರಣಾ ಘಟಕಗಳಿಂದ … Read more