ತನ್ನ ಶಕ್ತಿ ಗೊತ್ತಿರಲಿಲ್ಲವಂತೆ ಹನುಮಂತನಿಗೆ!

ಬಂಟ್ವಾಳ ತಾಲೂಕಿನ ಮಂಚಿ ಬಿ.ವಿ. ಕಾರಂತರ ಹುಟ್ಟೂರು. ಈ ತಿಂಗಳ ೯,೧೦,೧೧ರಂದು ಅಲ್ಲಿ ಅವರ ನೆನಪಿಗಾಗಿ ಅವರ ಅಭಿಮಾನಿಗಳೆಲ್ಲ ಸೇರಿ ಹಲವು ಕಾರ್ಯಕ್ರಮಗಳನ್ನು ನಡೆಸಿದರು. ನಾನು ಈ ಕಾರ್ಯಕ್ರಮದ ಬಗ್ಗೆ ಹೇಳಲು ಹೊರಟದ್ದಲ್ಲ. ಆ ದಿನ ಶ್ರೀಮತಿ ವೈದೇಹಿಯವರು ವ್ಯಕ್ತಪಡಿಸಿದ ಒಂದು ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಬೇಕೆನ್ನಿಸಿದ್ದರಿಂದ ಈ ಬರಹ.ವೈದೇಹಿಯವರು ಆ ದಿನ ಸಂಜೆಯ ತಮ್ಮ ಭಾಷಣದಲ್ಲಿ ಪ್ರಾಸಂಗಿಕವಾಗಿ ಒಂದು ಮಾತು ಹೇಳಿದರು: “ಎಂಜಿನಿಯರ್ ಎಂದರೆ ಮರಗಳನ್ನು ಕಡಿದು ರಸ್ತೆ ನಿರ್ಮಿಸುವವನಲ್ಲ. ಆ ಕೆಲಸವನ್ನು ಯಾವ ಕಂಟ್ರಾಕ್ಟರ್ ಕೂಡ … Read more

ಅರಣ್ಯ ಇಲಾಖೆಯ ಉತ್ತರ ಬಂತು, ಆದರೆ……

ತಾ. ೧೬-೩-೧೦ರ ನನ್ನ ಪತ್ರಕ್ಕೆ ಮಂಗಳೂರು ಉ.ಅ.ಸಂ.ಯವರು ನನಗೆ ಉತ್ತರಿಸದಿದ್ದರೂ, ತಾ. ೨೦-೩-೧೦ರಂದೇ ಅದನ್ನು ಸುಬ್ರಹ್ಮಣ್ಯ ಉಪವಿಭಾಗದ ಸ.ಅ.ಸಂ.ಯವರಿಗೆ ಕಳಿಸಿಕೊಟ್ಟಿದ್ದಾರೆ. ಎಂದರೆ ನನ್ನ ಪತ್ರ ಅವರಿಗೆ ಮುಟ್ಟಿದ ಒಂದೆರಡು ದಿನಗಳಲ್ಲಿಯೇ ಅದರ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಅವರಿಗೆ ಅಭಿನಂದನೆಗಳು.ನನ್ನ ನೆನಪೋಲೆ ಹೋದಮೇಲೆ ಅವರು ಸುಳ್ಯದ ಉ.ಸ.ಅ.ಸಂ.ಯವರಿಗೆ ಮತ್ತೊಂದು ಅರೆಸರಕಾರಿ ಪತ್ರ ಬರೆದು ನನಗೆ ಅದರ ಯಥಾಪ್ರತಿಯನ್ನು ಕಳಿಸಿಕೊಟ್ಟಿದ್ದಾರೆ. ಆ ಪತ್ರ ಹೀಗಿದೆ:………”ಮೇಲಿನ ವಿಷಯಕ್ಕೆ ಸಂಬಂಧಿಸಿ ಉಲ್ಲೇಖ(೧)ರ ಈ ಕಾರ್ಯಾಲಯದ ಪತ್ರದ ಕಡೆಗೆ ನಿಮ್ಮ ಗಮನ ಸೆಳೆಯಲಾಗಿದೆ. ಸದ್ರಿ … Read more

ತಾ. ೨-೪-೧೦ಇವೊತ್ತಿನ ಉದಯವಾಣಿಯ ವಾರ್ತೆ:ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ: ಸುಬ್ರಹ್ಮಣ್ಯ ಶ್ರೀಪ್ರಕೃತಿಯಲ್ಲಿ ಭಗವಂತನ ಶಕ್ತಿ ಅಡಗಿದೆ. ಆದುದರಿಂದಾಗಿ ನಮ್ಮ ಹಿರಿಯರು ಪ್ರಕೃತಿಯನ್ನು ಆರಾಧನೆ ಮಾಡುವುದರೊಂದಿಗೆ ಪ್ರಕೃತಿಯ ಸೊಬಗಿನ ನಡುವೆ ಆರಾಧನಾಲಯಗಳನ್ನು ನಿರ್ಮಿಸಿದರು. ನಮ್ಮದು ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ ಎಂದು ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. (ವಾರ್ತೆಯಲ್ಲಿ ಅವರ ಇನ್ನೂ ಕೆಲವು ಅಭಿಪ್ರಾಯಗಳಿವೆ)ಇದೇ ವಾರ್ತೆ ಹೀಗೆ ಮುಂದುವರಿದಿದೆ:…..ವಾಸ್ತು ತಜ್ಞ ಶ್ರೀಕೃಷ್ಣ ಮಹಾಲಿಂಗ ಪ್ರಸಾದ್ ಮುನಿಯಂಗಳ ಮಾತನಾಡಿ ನಮ್ಮ ಪ್ರದೇಶದಲ್ಲಿನ ಬಹುತೇಕ ಶ್ರದ್ಧಾಕೇಂದ್ರಗಳು ಅರಣ್ಯ … Read more