ತಾ. ೨-೪-೧೦ಇವೊತ್ತಿನ ಉದಯವಾಣಿಯ ವಾರ್ತೆ:ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ: ಸುಬ್ರಹ್ಮಣ್ಯ ಶ್ರೀಪ್ರಕೃತಿಯಲ್ಲಿ ಭಗವಂತನ ಶಕ್ತಿ ಅಡಗಿದೆ. ಆದುದರಿಂದಾಗಿ ನಮ್ಮ ಹಿರಿಯರು ಪ್ರಕೃತಿಯನ್ನು ಆರಾಧನೆ ಮಾಡುವುದರೊಂದಿಗೆ ಪ್ರಕೃತಿಯ ಸೊಬಗಿನ ನಡುವೆ ಆರಾಧನಾಲಯಗಳನ್ನು ನಿರ್ಮಿಸಿದರು. ನಮ್ಮದು ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ ಎಂದು ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. (ವಾರ್ತೆಯಲ್ಲಿ ಅವರ ಇನ್ನೂ ಕೆಲವು ಅಭಿಪ್ರಾಯಗಳಿವೆ)ಇದೇ ವಾರ್ತೆ ಹೀಗೆ ಮುಂದುವರಿದಿದೆ:…..ವಾಸ್ತು ತಜ್ಞ ಶ್ರೀಕೃಷ್ಣ ಮಹಾಲಿಂಗ ಪ್ರಸಾದ್ ಮುನಿಯಂಗಳ ಮಾತನಾಡಿ ನಮ್ಮ ಪ್ರದೇಶದಲ್ಲಿನ ಬಹುತೇಕ ಶ್ರದ್ಧಾಕೇಂದ್ರಗಳು ಅರಣ್ಯ … Read more

ಜಾಗೆದು ಗುರ್ತೇ ಸಿಕ್ತಿಲ್ಲೆ – ಭಾಗ-೨

ಹಿಂದಿನ ಲೇಖನದಲ್ಲಿ ಮಾಹಿತಿ ಬಂದ ಕೂಡಲೇ ತಿಳಿಸುವುದಾಗಿ ಬರೆದಿದ್ದೆ. ದಿನಾಂಕ ೧೭-೩-೨೦೧೦ರಂದು ಸುಬ್ರಹ್ಮಣ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ನನಗೆ ಮಾಹಿತಿ ನೀಡಿದ್ದಾರೆ.ನಾನು ಕೇಳಿದ ಮಾಹಿತಿ ೧: ಗುಡ್ಡವನ್ನು ಸಮತಟ್ಟು ಮಾಡುವಾಗ ಅಲ್ಲಿದ್ದ ಹಲವಾರು ಮರಗಳು ನಾಶವಾಗಿರುವ ಸಾಧ್ಯತೆ ಇದೆ. ಹೀಗೆ ಮರಗಳನ್ನು ನಾಶ ಮಾಡಲು ನಿಮ್ಮ ಇಲಾಖೆ ಅನುಮತಿ ನೀಡಿದೆಯೆ?ಉತ್ತರ:ಸದ್ರಿ ಸ್ಥಳದಲ್ಲಿರುವ ಮರಮಟ್ಟುಗಳನ್ನು ಕಡಿಯಲು ಇಲಾಖಾವತಿಯಿಂದ ಯಾವುದೇ ಅನುಮತಿಯನ್ನು ನೀಡಿರುವುದಿಲ್ಲ.ನಾನು ಕೇಳಿದ ಮಾಹಿತಿ ೨: ನೀಡಿದ್ದರೆ ಅನುಮತಿಯ ಯಥಾಪ್ರತಿಯನ್ನು ನನಗೆ ನೀಡಬೇಕಾಗಿ ಕೋರುತ್ತೇನೆ.ಉತ್ತರ: ಅನುಮತಿ ನೀಡದೇ ಇರುವುದರಿಂದ … Read more

ಜಾಗೆದು ಗುರ್ತೇ ಸಿಕ್ತಿಲ್ಲೆ!

ಕಳೆದ ವರ್ಷ ಪ್ರೇಮಕ್ಕ ಮಂಗಳೂರಿನಿಂದ ನಮ್ಮಲ್ಲಿಗೆ ಬಂದಾಗ ಇವಳ ಹತ್ತಿರ “ರಾತ್ರೆ ಬೆಳ್ಗಾತ ಹೊತ್ತಿಗೆ ಗುಡ್ಡೆನೇ ಇಲ್ಲ ಮಾಡಿಬಿಡ್ತ್ರ್ಯ. ಬೆಳ್ಗಾತ ಕಂಡ್ರೆ ಜಾಗೆದು ಗುರ್ತೇ ಸಿಕ್ತಿಲ್ಲೆ, ಹಂಗಾಗಿರ್ತ್” ಅಂದಿದ್ದರು. ಜೆಸಿಬಿಗೆ ಗುಡ್ಡ, ಕಣಿವೆಗಳನ್ನು ಕಂಡರಾಗುವುದಿಲ್ಲ. ಸಾವಿರಾರು ಜೆಸಿಬಿಗಳು ದಕ್ಷಿಣ ಕನ್ನಡವನ್ನು ಬಯಲು ಸೀಮೆ ಮಾಡಲು ಹಗಲೂ ರಾತ್ರಿ ಶ್ರಮಿಸುತ್ತಿವೆ. ಗುಡ್ಡೆ ತಟ್ಟು ಮಾಡುವುದು ಸೈಟು ಮಾಡಿ ಮಾರುವುದು, ಸೈಟು ಕೊಂಡವರು ನೀರಿಗೆಂದು ಬೋರು ಹಾಕುವುದು.ದಕ್ಷಿಣ ಕನ್ನಡದ ಜೀವ ಇರುವುದೇ ಇಲ್ಲಿನ ಗುಡ್ಡಬೆಟ್ಟಗಳಲ್ಲಿ, ಸುಂದರವಾದ ಕಣಿವೆಗಳಲ್ಲಿ, ಇದನ್ನು ಯಾವ … Read more

ಕಸ ವಿಲೇವಾರಿಯ ಕಗ್ಗಂಟು

“ಆಧುನಿಕ”ವೆಂದು ಕರೆಸಿಕೊಳ್ಳುವ ಯಾವುದೇ ದೊಡ್ಡ ಊರಿಗೆ ನೀವು ಹೋಗಿ, ಇಡೀ ಊರಿನ ಗಾಳಿಯಲ್ಲಿ ಒಂದು ವಿಶಿಷ್ಟ ದುರ್ನಾತ ಹಾಸುಹೊಕ್ಕಾಗಿ ತುಂಬಿ ತುಳುಕುತ್ತಿರುತ್ತದೆ. ಈ ದುರ್ನಾತದ ಕಾಯಿಲೆ ಇತ್ತೀಚೆಗೆ ನಮ್ಮ ಬಿ.ಸಿ.ರೋಡಿನಂಥ ಸಣ್ಣ ಊರುಗಳಿಗೂ ಹಬ್ಬುತ್ತಿದೆ. ಮೊನ್ನೆ ಮೊನ್ನೆ ತಮಿಳುನಾಡಿನ ತಿರುಚ್ಚಿಗೆ ಹೋಗುವ ಪ್ರಸಂಗ ಬಂದಿತ್ತು. ಊರು ಶುರುವಾದಕೂಡಲೇ, ಇಡೀ ಊರಿನ ಎಲ್ಲರ ಮನೆಗಳಲ್ಲೂ ಏಕಕಾಲದಲ್ಲಿ ಮೂಲಂಗಿ ಹುಳಿ ಮಾಡುತ್ತಿದ್ದಾರೇನೋ ಎಂಬಂಥ ಉಸಿರು ಕಟ್ಟಿಸುವ ದುರ್ನಾತ. ಆದರೆ ಆ ಊರೊಳಗಿನ ಯಾರಿಗೂ ಈ ನಾತದ ಅರಿವೇ ಇದ್ದಂತೆ ಕಾಣಲಿಲ್ಲ! … Read more