ನೇತ್ರಾವತಿ ತಿರುವು: ಡಾ. ಮಧು ಸೀತಪ್ಪನವರೊಂದಿಗೆ ಸಂವಾದ

ಪ್ರಿಯ ಮಧು ಸೀತಪ್ಪನವರಿಗೆ ನಮಸ್ಕಾರ. ದೂರದ ಬ್ರಿಟನ್ನಿನಲ್ಲಿದ್ದೂ ತಾಯಿನಾಡಿನ ಸಮಸ್ಯೆಗಳ ಬಗ್ಗೆ ನೀವು ತೋರಿಸುತ್ತಿರುವ ಆಸಕ್ತಿಗಾಗಿ ಅಭಿನಂದನೆಗಳು.ನಾನು ವಿಜಯ ಕರ್ನಾಟಕದಲ್ಲಿ ಪ್ರಕಟವಾದ ನಿಮ್ಮ ಲೇಖನವನ್ನು ಓದಿರಲಿಲ್ಲ. ಇತ್ತೀಚೆಗೆ ಅಕಸ್ಮಾತ್ತಾಗಿ ನಿಮ್ಮ ಬ್ಲಾಗನ್ನು ನೋಡಿದೆ. ನೇತ್ರಾವತಿ ತಿರುವು ಯೋಜನೆಯ ಕುರಿತು ನಾನು ಮೊದಲಿಂದಲೂ ಆಸಕ್ತಿ ತಳೆದವನು. ಹಾಗಾಗಿ ನಿಮ್ಮ ಲೇಖನಗಳನ್ನು ಕುತೂಹಲದಿಂದ ಓದಿದೆ. ಓದಿದ ನಂತರ ನನ್ನ ಕೆಲವು ವಿಚಾರಗಳನ್ನು ಮಂಡಿಸಿದ್ದೇನೆ. ನಿಮ್ಮಿಂದ ಉತ್ತರ ನಿರೀಕ್ಷಿಸುತ್ತೇನೆ.“ಪ್ರಪಂಚದ ಮುಂದಿನ ಮಹಾಯುದ್ಧ ನೀರಿಗಾಗಿ ನಡೆಯಲಿದೆ” ಎಂದು ಯಾರೋ ಹೇಳಿದ್ದಾರಂತೆ. ನೀರು ದಿನದಿಂದ … Read more

ಅಂತೂ ಬಂತು ಅಂತರ್ಜಲ ವಿಧೇಯಕ – ೨೦೧೧

ಜನ ಬೇಕಾಬಿಟ್ಟಿಯಾಗಿ ಸಾಕಷ್ಟು ಕೊಳವೆ ಬಾವಿಗಳನ್ನು ಕೊರೆದು ಮುಗಿಸುವವರೆಗೂ ಕಾದು, ಹೆಚ್ಚುಕಡಿಮೆ ಎಲ್ಲ ಮುಗಿದ ಮೇಲೆ, ಈಗ ಕರ್ನಾಟಕ ಸರಕಾರವು, ಕೊಳವೆ ಬಾವಿಗಳನ್ನು ಬೇಕಾಬಿಟ್ಟಿಯಾಗಿ ಕೊರೆಯುವುದನ್ನು ನಿಯಂತ್ರಿಸುವ ಉದ್ದೇಶದಿಂದ, ಒಂದು ವಿಧೇಯಕವನ್ನು ವಿಧಾನಮಂಡಲದ ಎರಡೂ ಸದನಗಳಲ್ಲಿಟ್ಟು ಅಂಗೀಕಾರ ಪಡೆದಿದೆ. ಪಕ್ಷಾಂತರವೋ, ಅದಿರು ತಿಂದವರು ಯಾರು ಎಂಬುದರ ಕಚ್ಚಾಟವೋ ಇಂಥದೇ ಯಾವುದೋ ಒಂದು ಪ್ರಕರಣ ವಿಧಾನಮಂಡಲದ ಕಾರ್ಯ ಕಲಾಪಗಳನ್ನೇ ತಿಂದು ಹಾಕುತ್ತಿದ್ದ ದಿನಗಳಲ್ಲಿ, ಈ ವಿಧೇಯಕ ಒಂದು ಸಂದಿಯಲ್ಲಿ ಯಾರಿಗೂ ಗೊತ್ತಾಗದ ಹಾಗೆ ಪಾಸಾಗಿಬಿಟ್ಟಿದೆ. ಕರ್ನಾಟಕದ ಯಾವುದೇ ಶಾಸಕನಿಗೂ, … Read more

ಎಂಡೋಸಲ್ಫಾನ್: ಸದ್ದಿಲ್ಲದೆ ಬಿದ್ದ ಅಣುಬಾಂಬ್

ಸುಮಾರು ಒಂದು ತಿಂಗಳ ಹಿಂದೆ ಡಾ ರವೀಂದ್ರನಾಥ ಶಾನುಭಾಗರಿಂದ ಒಂದು ಮೈಲ್ ಬಂತು: ಅದು ಎಂಡೋ ಸಲ್ಫಾನ್ ಬಹಿಷ್ಕರಿಸುವ ವಿಷಯದಲ್ಲಿ. ನಾನು ಉತ್ತರಿಸಿದೆ: “ಕುಡಿಯುವ ನೀರಿಗೆ, ತಿನ್ನುವ ಅನ್ನಕ್ಕೆ ಅಪಾಯ ಬಂದರೂ ಜನ ಎದ್ದು ಪ್ರತಿಭಟಿಸುತ್ತಾರೆಂದು ನನಗೆ ಅನ್ನಿಸುವುದಿಲ್ಲ. ಆದರೂ, ನಾವು ಮಾಡಬೇಕಾದ್ದನ್ನು ಮಾಡಲೇಬೇಕು. ಖಂಡಿತ ಮಾಡೋಣ” ಕಳೆದ ತಿಂಗಳಿನಲ್ಲಿ ಕರ್ನಾಟಕ ಸರಕಾರ ಎಂಡೋಸಲ್ಫಾನನ್ನು ಎರಡು ತಿಂಗಳ ಮಟ್ಟಿಗೆ ನಿಷೇಧಿಸಿತು.. ಹೀಗೆ ಮಾಡಲು ಮೂಲ ಕಾರಣ ಬೆಳ್ತಂಗಡಿಯ ವಿಶ್ವನಾಥ ಗೌಡ ಮತ್ತು ಪುತ್ತೂರಿನ ಸಂಜೀವ ಎಂಬ ಸಾಮಾಜಿಕ … Read more