ನೇತ್ರಾವತಿ ತಿರುವು ಯೋಜನೆ: ಎತ್ತಿನಹೊಳೆಯಿಂದ ಪ್ರಾರಂಭ?

ಕಳೆದ ವರ್ಷದ (2010) ಕರ್ನಾಟಕ ಸರ್ಕಾರದ ಬಜೆಟ್ಟಿನಲ್ಲಿ ಎತ್ತಿನಹೊಳೆಯಿಂದ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ನೀರನ್ನು ತಿರುಗಿಸುವ ಯೋಜನೆಯ ಪ್ರಸ್ತಾವವಿತ್ತು. ಈವರೆಗೂ ನೇತ್ರಾವತಿಯನ್ನು ತಿರುಗಿಸುವ ಮಾತಾಡುತ್ತಿದ್ದವರು ಈಗ ಎತ್ತಿನಹೊಳೆ ತಿರುಗಿಸುವ ಬಗ್ಗೆ ಮಾತಾಡಲು ಶುರು ಮಾಡಿದ್ದರು. ಬಜೆಟ್ಟಿನಲ್ಲಿ ಹುಡುಕಿ ನೋಡಿದಾಗ ಅಲ್ಲಿ ಹೀಗಿತ್ತು:“107) ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡಲು ಪಶ್ಚಿಮ ವಾಹಿನಿಗಳ ಮೂಲಕ ನೀರನ್ನು ತಿರುಗಿಸಲು ವಿವರವಾದ ಯೋಜನಾವರದಿಗಳ ಸಮೀಕ್ಷಾಕಾರ್ಯವು ಎನ್. ಆರ್. ಎಸ್.

Read more