ರಾಜರೆಂಬರುಮೊಳರೆ?

(ಸುಮಾರು ಒಂದು ಸಾವಿರ ವರ್ಷಗಳ ಹಿಂದೆ ಶಿವಕೋಟ್ಯಾಚಾರ್ಯ ಎಂಬುವವನು ವಡ್ಡಾರಾಧನೆ ಎಂಬ ಕೃತಿ ರಚಿಸಿದ್ದಾನೆ. ಅದರಲ್ಲಿ ಹಲವಾರು ಕಥೆಗಳಿವೆ. ಸುಕುಮಾರಸ್ವಾಮಿಯ ಕಥೆ ಅವುಗಳಲ್ಲಿ ಒಂದು. ಸುಕುಮಾರ ಸ್ವಾಮಿ ದೊಡ್ಡ ಶ್ರೀಮಂತ. ಒಂದು ದಿನ ಅವನು ಎಂದಿನಂತೆ ತನ್ನ ಮನೆಯ ಮಹಡಿಯಲ್ಲಿ ವಿಶ್ರಮಿಸಿದ್ದ. ಆಗ ದೂತನೊಬ್ಬ ಬಂದು ಅವನಿಗೆ ಹೇಳಿದ. “ಸ್ವಾಮೀ ನಿಮ್ಮನ್ನು ನೋಡಲು ಮಹಾರಾಜರು ಬಂದಿದ್ದಾರೆ. ಅವರನ್ನು ನೋಡಲು ನೀವು ಕೆಳಗೆ ಬರಬೇಕು” ಸುಕುಮಾರಸ್ವಾಮಿ ಆಶ್ಚರ್ಯದಿಂದ ಕೇಳಿದನಂತೆ: ರಾಜರು ಅಂತ ಇರುತ್ತಾರೆಯೆ? (ರಾಜರೆಂಬರುಮೊಳರೆ?)ಎಂ. ಎಸ್. ಇ. ಜಡ್

Read more