ಪಂಪಭಾರತ ಆಶ್ವಾಸ ೧ ಪದ್ಯಗಳು ೧೦೪ರಿಂದ ೧೧೪
ಪಂಪಭಾರತ ಆಶ್ವಾಸ ೧ ಪದ್ಯಗಳು ೧೦೪ರಿಂದ ೧೧೪ ಕಂ|| ಕೂರಿ[ಸೆ] ಗುರುಶುಶ್ರೂಷೆಯೊ | ಳಾ ರಾಮನನುಗ್ರ ಪರಶುಪಾಟಿತ ರಿಪು ವಂ || ಶಾರಾಮನನಿಷು ವಿದ್ಯಾ | ಪಾರಗನೆನಿಸಿದುದು ಬಲ್ಮೆ ವೈಕರ್ತನನಾ ||೧೦೪|| ತನ್ನ ಉಗ್ರವಾದ ಕೊಡಲಿಯಿಂದ ವೈರಿಗಳ ವಂಶವನ್ನೇ ನಾಶ ಮಾಡಿದ ಪರಶುರಾಮನಿಗೆ ಪ್ರೀತಿ ಹುಟ್ಟುವಂತೆ ಕರ್ಣನು ಆತನ ಸೇವೆ ಮಾಡಿ ಬಿಲ್ವಿದ್ಯೆಯಲ್ಲಿ ಪಾರಂಗತನಾದನು. (ಕೂರಿಸೆ ಗುರುಶುಶ್ರೂಷೆಯೊಳ್ ಆ ರಾಮನನ್, ಉಗ್ರ ಪರಶುಪಾಟಿತ ರಿಪು ವಂಶಾರಾಮನನ್, ಇಷು ವಿದ್ಯಾ ಪಾರಗನ್ ಎನಿಸಿದುದು ಬಲ್ಮೆ … Read more