ಪಂಪಭಾರತ ಆಶ್ವಾಸ ೨ ಪದ್ಯಗಳು ೪೧ರಿಂದ ೫೪ ವ|| ಅಂತು ನಕುಲ ಸಹದೇವರ್ ಸಹಿತಮಯ್ವರುಂ ನವಯೌವನದ ಪರಮಸುಖಮನೆಯ್ದಿ ಸಂತೋಷದಿನಿರ್ದರಿತ್ತ ಗಂಗಾದ್ವಾರದೊಳ್ ಭರದ್ವಾಜನೆಂಬ ಬ್ರಹ್ಮಋಷಿ–  (ಅಂತು ನಕುಲ ಸಹದೇವರ್ ಸಹಿತಂ ಅಯ್ವರುಂ ನವಯೌವನದ ಪರಮಸುಖಮನ್ ಎಯ್ದಿ ಸಂತೋಷದಿನ್ ಇರ್ದರ್. ಇತ್ತ ಗಂಗಾದ್ವಾರದೊಳ್ ಭರದ್ವಾಜನೆಂಬ ಬ್ರಹ್ಮಋಷಿ-) ಹೀಗೆ ನಕುಲ, ಸಹದೇವರ ಸಹಿತ ಐವರೂ ಹೊಸ ಯೌವನದ ಪರಮ ಸುಖವನ್ನು ಹೊಂದಿ ಸಂತೋಷದಿಂದ ಇದ್ದರು. ಇತ್ತ ಗಂಗಾದ್ವಾರದಲ್ಲಿ ಭರದ್ವಾಜನೆಂಬ ಬ್ರಹ್ಮ ಋಷಿಯು-ಕಂ|| ಸ್ನಾನಾರ್ಥಮೊಂದು ಕಳಶಮ     ನಾ ನಿಯಮ ನಿಧಾನನೆೞಲೆ ಪಿಡಿದಮಳಿನ ಗಂ| … Read more