ಪಂಪಭಾರತ ಆಶ್ವಾಸ ೩ ಪದ್ಯಗಳು ೧೨-೨೦ ಎಂದು ನುಡಿಯುತ್ತಿದ್ದಂತೆ ತಾವರೆಯ ಬಂಧುವು ಉದಯಾಚಲ ಪರ್ವತದ ನೆತ್ತಿಯಲ್ಲಿ ಕಾಣಿಸಿಕೊಂಡನು. ಆಗ, ಆ ಕಾಡನ್ನು ಆಳುವ ಹಿಡಿಂಬನೆಂಬುವನು, ಪಾಂಡವರು ಬಂದಿರುವುದನ್ನು ತಿಳಿದು, ತನ್ನ ತಂಗಿ ಹಿಡಿಂಬೆಯನ್ನು ಕರೆದು- ಕಂ|| ನಿಡಿಯರ್ ಬಲ್ಲಾಯದ ಬ ಲ್ಡಡಿಗರ್ ವಂದಿರ್ದರಯ್ವರಾಲದ ಕೆೞಗಿಂ| ತೊಡರ್ದರ್ ನಮ್ಮಯ ಭಕ್ಷದೊ ಳಡು ಪಣ್ಣಿಡು ಪೋಗು ನೀನುಮಾನುಂ ತಿಂಬಂ|| ೧೨|| (ನಿಡಿಯರ್, ಬಲ್ಲಾಯದ ಬಲ್ಡಡಿಗರ್, ವಂದಿರ್ದರ್ ಅಯ್ವರ್ ಆಲದ ಕೆೞಗೆ, ಇಂ ತೊಡರ್ದರ್, ನಮ್ಮಯ ಭಕ್ಷದೊಳ್ … Read more