ಪಂಪಭಾರತ ಆಶ್ವಾಸ ೩ ಪದ್ಯಗಳು ೬೫ರಿಂದ ೭೪
ವ|| ಆಗಳ್ ದ್ರುಪದಂ ಬದ್ದವಣದ ಪಱೆಗಳಂ ಬಾಜಿಸಲ್ವೇೞ್ದು ಸುರತ ಮಕರ ಧ್ವಜನಂ ದ್ರೌಪದಿಯೊಡನೆ ಸಿವಿಗೆಯನೇಱಿಸಿ ಧೃಷ್ಟದ್ಯುಮ್ನ ಯುಧಾಮನ್ಯೂತ್ತಮೌಜಶ್ಶಿಖಂಡಿ ಚೇಕಿತಾನರೆಂಬ ತನ್ನ ಮಗಂದಿರುಂ ತಮ್ಮಂದಿರುಂಬೆರಸು ನೆಲಂ ಮೂರಿವಿಟ್ಟಂತೆ ಬರೆ ಮುಂದಿಟ್ಟು ಪೊೞಲ್ಗೊಡಗೊಂಡುವರ್ಪುದುಮಿತ್ತ ದುರ್ಯೋಧನಂ ಕರ್ಣ ಶಲ್ಯ ಶಕುನಿ ದುಶ್ಶಾಸನಾದಿಗಳೊಳಾಲೋಚಿಸಿ ಪೇೞಿಮೇಗೆಯ್ವಮೆನೆ ಕರ್ಣನಿಂತೆಂದಂ– (ಆಗಳ್ ದ್ರುಪದಂ ಬದ್ದವಣದ ಪಱೆಗಳಂ ಬಾಜಿಸಲ್ ಪೇೞ್ದು, ಸುರತ ಮಕರ ಧ್ವಜನಂ ದ್ರೌಪದಿಯೊಡನೆ ಸಿವಿಗೆಯನ್ ಏಱಿಸಿ, ಧೃಷ್ಟದ್ಯುಮ್ನ ಯುಧಾಮನ್ಯು, ಉತ್ತಮೌಜ, ಶಿಖಂಡಿ, ಚೇಕಿತಾನರೆಂಬ ತನ್ನ ಮಗಂದಿರುಂ ತಮ್ಮಂದಿರುಂಬೆರಸು ನೆಲಂ ಮೂರಿವಿಟ್ಟಂತೆ ಬರೆ, ಮುಂದಿಟ್ಟು ಪೊೞಲ್ಗೆ … Read more