ಪಂಪಭಾರತ ಆಶ್ವಾಸ ೩ ಪದ್ಯಗಳು ೬೫ರಿಂದ ೭೪

  ವ|| ಆಗಳ್ ದ್ರುಪದಂ ಬದ್ದವಣದ ಪಱೆಗಳಂ ಬಾಜಿಸಲ್ವೇೞ್ದು ಸುರತ ಮಕರ ಧ್ವಜನಂ ದ್ರೌಪದಿಯೊಡನೆ ಸಿವಿಗೆಯನೇಱಿಸಿ ಧೃಷ್ಟದ್ಯುಮ್ನ ಯುಧಾಮನ್ಯೂತ್ತಮೌಜಶ್ಶಿಖಂಡಿ ಚೇಕಿತಾನರೆಂಬ ತನ್ನ ಮಗಂದಿರುಂ ತಮ್ಮಂದಿರುಂಬೆರಸು ನೆಲಂ ಮೂರಿವಿಟ್ಟಂತೆ ಬರೆ ಮುಂದಿಟ್ಟು ಪೊೞಲ್ಗೊಡಗೊಂಡುವರ್ಪುದುಮಿತ್ತ ದುರ್ಯೋಧನಂ ಕರ್ಣ ಶಲ್ಯ ಶಕುನಿ ದುಶ್ಶಾಸನಾದಿಗಳೊಳಾಲೋಚಿಸಿ ಪೇೞಿಮೇಗೆಯ್ವಮೆನೆ ಕರ್ಣನಿಂತೆಂದಂ– (ಆಗಳ್ ದ್ರುಪದಂ ಬದ್ದವಣದ ಪಱೆಗಳಂ ಬಾಜಿಸಲ್‌ ಪೇೞ್ದು, ಸುರತ ಮಕರ ಧ್ವಜನಂ ದ್ರೌಪದಿಯೊಡನೆ ಸಿವಿಗೆಯನ್‌ ಏಱಿಸಿ, ಧೃಷ್ಟದ್ಯುಮ್ನ ಯುಧಾಮನ್ಯು, ಉತ್ತಮೌಜ, ಶಿಖಂಡಿ, ಚೇಕಿತಾನರೆಂಬ ತನ್ನ ಮಗಂದಿರುಂ ತಮ್ಮಂದಿರುಂಬೆರಸು ನೆಲಂ ಮೂರಿವಿಟ್ಟಂತೆ ಬರೆ, ಮುಂದಿಟ್ಟು ಪೊೞಲ್ಗೆ … Read more

ಪಂಪಭಾರತ ಆಶ್ವಾಸ ೩ ಪದ್ಯಗಳು ೫೩ರಿಂದ ೬೪

ಪಂಪಭಾರತ ಆಶ್ವಾಸ ೩ ಪದ್ಯಗಳು ೫೩ರಿಂದ ೬೪   ವ|| ಆಗಳ್ ಪಾಂಡವರ್ ತಮ್ಮಂ ಪೆಱರಱಿಯದಂತು ಬ್ರಾಹ್ಮಣವೇಷದೊಳೆ ಬ್ರಹ್ಮಸಭೆಯೊಳ್ ಬಂದಿರೆ- ಆಗ ಪಾಂಡವರು ತಮ್ಮನ್ನು ಬೇರೆಯವರು ಗುರುತಿಸದಂತೆ ಬ್ರಾಹ್ಮಣವೇಷದಲ್ಲಿ ಬ್ರಾಹ್ಮಣರ ಸಭೆಯಲ್ಲಿ ಬಂದು ಇದ್ದರು.   ಚಂ|| ಇಳೆಯೊಳುದಗ್ರ ವೀರ ಭಟ ತುಂಗ ಮತಂಗಜ ವಾಜಿ ರಾಜಿ ಚೌ ಪಳಿಗೆಗಳೊಳ್ ಧರಾಧರ ಧುರಂಧರ ಬಂಧುರ ರಾಜಕಂ ವಿಯ| ತ್ತಳದೊಳನೇಕ ಕಿಂಪುರುಷ ಕಿನ್ನರ ಖೇಚರ ಸಿದ್ಧ ಬೃಂದಮ ವ್ವಳಿಸಿರೆ ಮೂಱು ಲೋಕಮನೆ ಪೋಲ್ತುದು ಮೂನೆಲೆಯಿಂ ಸ್ವಯಂಬರಂ|| ೫೩ || … Read more