ಪಂಪಭಾರತ ಆಶ್ವಾಸ ೩ ಪದ್ಯಗಳು ೭೫ರಿಂದ ೮೫
ವ||ಆಗಳ್ ದ್ರುಪದಂ ಪಚ್ಚೆಯ ನೆಲಗಟ್ಟಿನೊಳಂ ರಾಜಾವರ್ತದ ಕಂಬದೊಳಂ ಪವಳದ ಜಂತೆಯೊಳಂ ಪದ್ಮರಾಗದ ಬೋದಿಗೆಯೊಳಮಿಂದ್ರನೀಲದ ಭದ್ರದೊಳಂ ಕರ್ಕೇತನದ ಜಾಳರಿಗೆಯೊಳಂ ಪಳುಕಿನ ಚಿತ್ರಭಿತ್ತಿಯೊಳಂ ಚಂದ್ರಕಾಂತದ ಚಂದ್ರಶಾಲೆಯೊಳಮೊಪ್ಪುವ ವಿವಾಹಗೇಹಮಂ ಸಮೆಯಿಸಿಯದಱ ನಡುವಣಾರ್ದ್ರಮೃತ್ತಿಕಾವಿರಚಿತಮಪ್ಪ ಚತುರಾಂತರದೊಳ್ ಮುತ್ತಿನ ಚೌಕದ ನಡುವಣ ಚೆಂಬೊನ್ನ ಪಟ್ಟವಣೆಯ ಮೇಗಣ ದುಗುಲದ ಪಸೆಯೊಳ್ ಗುಣಾರ್ಣವನನಾ ದ್ರುಪದಜೆಯನೊಡನೆ ಕುಳ್ಳಿರಿಸಿ ಹಿತ ಪುರೋಹಿತ ಪ್ರಾಜ್ಯಾಜ್ಯಾಹುತಿಹುತ ಹುತವಹಸಮಕ್ಷದೊಳ್ ಕೆಯ್ನೀರೆರೆದು ಪಾಣಿಗ್ರಹಂಗೆಯ್ಸೆ- (ಆಗಳ್ ದ್ರುಪದಂ ಪಚ್ಚೆಯ ನೆಲಗಟ್ಟಿನೊಳಂ, ರಾಜಾವರ್ತದ ಕಂಬದೊಳಂ, ಪವಳದ ಜಂತೆಯೊಳಂ, ಪದ್ಮರಾಗದ ಬೋದಿಗೆಯೊಳಂ, ಇಂದ್ರನೀಲದ ಭದ್ರದೊಳಂ, ಕರ್ಕೇತನದ ಜಾಳರಿಗೆಯೊಳಂ, ಪಳುಕಿನ ಚಿತ್ರಭಿತ್ತಿಯೊಳಂ, … Read more