ಪಂಪಭಾರತ ಆಶ್ವಾಸ ೫ ಪದ್ಯಗಳು ೧೧ರಿಂದ ೧೯
ವ|| ಅಂತಾಬಾಲೆ ಕಾಯ್ದ ಪುಡಿಯೊಳಗೆ ಬಿಸುಟ್ಟೆಳವಾೞೆಯಂತೆ ಸುರತ ಮಕರಧ್ವಜನೊಳಾದ ಬೇಟದೊಳ್ ಮಮ್ಮಲ ಮಱುಗುತ್ತಿರ್ದಳತ್ತ ಮನುಜ ಮನೋಜನುಂ ಮದನಪರಿತಾಪಕ್ಕಾಱದುಮ್ಮಳಿಸಿ ಮಧುಮಥನನ ಕಣ್ಣಂ ಬಂಚಿಸಿ ವಿಜೃಂಭಮಾಣ ನವ ನಳಿನ ಪರಿಕರಾಕೃಷ್ಟ ಮಧುಕರ ರಮಣೀಯಪುಳಿನ ಪರಿಸರ ಪ್ರದೇಶ ನಿವೇಶಿತ ವಿರಹಿ ಜನನಿಚಯ ನಿಚಿತ ಮಾನಸೋನ್ಮತ್ತ ಕಾಮಿನೀ ಗಂಡೂಷ ಸಿಂಧು ಸೇಕ ಪುಳಕಿತ ವಕುಳ ಮುಕುಳ ವಿದಳಿತ ಮನೋಹರಾಶೋಕಲತಾ ರಮಣೀ ರಮಣೀಯ ನೂಪುರರವ ರಮ್ಯಮನವಿರಳ ಕುಸುಮಧೂಳೀ ಧೂಸರ ಪುಳಿನ ಧವಳಿತ ಧರಾತಳಮನುತ್ಫುಲ್ಲ ಪಲ್ಲವ ಲೀಲಾಯಮಾನ ಮತ್ತಕೋಕಿಲೋಲ್ಲಾಸಿತ ಶೀಕರೋದ್ದಾಮ ದುರ್ದಿನ ವನಮನೆಯ್ದೆವಂದು- … Read more