Untitled

ತಾ. ೨-೪-೧೦
ಇವೊತ್ತಿನ ಉದಯವಾಣಿಯ ವಾರ್ತೆ:
ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ: ಸುಬ್ರಹ್ಮಣ್ಯ ಶ್ರೀ
ಪ್ರಕೃತಿಯಲ್ಲಿ ಭಗವಂತನ ಶಕ್ತಿ ಅಡಗಿದೆ. ಆದುದರಿಂದಾಗಿ ನಮ್ಮ ಹಿರಿಯರು ಪ್ರಕೃತಿಯನ್ನು ಆರಾಧನೆ ಮಾಡುವುದರೊಂದಿಗೆ ಪ್ರಕೃತಿಯ ಸೊಬಗಿನ ನಡುವೆ ಆರಾಧನಾಲಯಗಳನ್ನು ನಿರ್ಮಿಸಿದರು. ನಮ್ಮದು ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ ಎಂದು ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. (ವಾರ್ತೆಯಲ್ಲಿ ಅವರ ಇನ್ನೂ ಕೆಲವು ಅಭಿಪ್ರಾಯಗಳಿವೆ)
ಇದೇ ವಾರ್ತೆ ಹೀಗೆ ಮುಂದುವರಿದಿದೆ:
…..ವಾಸ್ತು ತಜ್ಞ ಶ್ರೀಕೃಷ್ಣ ಮಹಾಲಿಂಗ ಪ್ರಸಾದ್ ಮುನಿಯಂಗಳ ಮಾತನಾಡಿ ನಮ್ಮ ಪ್ರದೇಶದಲ್ಲಿನ ಬಹುತೇಕ ಶ್ರದ್ಧಾಕೇಂದ್ರಗಳು ಅರಣ್ಯ ವ್ಯಾಪ್ತಿಯಲ್ಲಿರುವುದರಿಂದ ಜೀರ್ಣೋದ್ಧಾರದಂತಹ ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟಾಗುತ್ತಿರುವುದು ಎಲ್ಲ ಕಡೆ ಕಂಡುಬರುತ್ತಿದೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಜನಪ್ರತಿನಿಧಿಗಳು ಮುಂದಾಗಬೇಕು ಎಂದರು.
*********
ನಾನು ಬರೆದ ಪತ್ರಕ್ಕೆ ಉತ್ತರಿಸಲು ದ.ಕ. ಜಿಲ್ಲಾ ಅರಣ್ಯಾಧಿಕಾರಿಯವರಿಗೆ ಇನ್ನೂ ಪುರುಸೊತ್ತು ಸಿಕ್ಕಿಲ್ಲ ಎಂಬುದು ವಿಷಾದದ ಸಂಗತಿ. ಮೊನ್ನೆ ಅಂದರೆ ೩೧-೩-೧೦ಕ್ಕೆ ಒಂದು ನೆನಪೋಲೆ ಅವರಿಗೆ ಬರೆದಿದ್ದೇನೆ.
*********
ಅನೇಕ ಸ್ನೇಹಿತರು ಬ್ಲಾಗನ್ನು ಓದಿರುವುದಾಗಿ ಹೇಳಿದ್ದಾರೆ. ಆದರೆ ಪ್ರತಿಕ್ರಿಯೆಗಳು ಇಲ್ಲವಾಗಿದೆ. ಅಶೋಕರ ಹತ್ತಿರ ಇದನ್ನು ಹೇಳಿದ್ದಕ್ಕೆ, “ಜನ ಜಡ. ಚುಚ್ತಾ ಇರಬೇಕು” ಎಂದರು. ಇದೊಂದು ಸಣ್ಣ ಮಟ್ಟದ ಚಳುವಳಿ: ಪ್ರಜಾಪ್ರಭುತ್ವದ ಅನುಸಂಧಾನದ ಒಂದು ಸಣ್ಣ ಪ್ರಯತ್ನ. ನೀವೂ ಇದರಲ್ಲಿ ಸೇರಿಕೊಳ್ಳಿ ಎಂದು ನಾನು ಬಾಯಿಬಿಟ್ಟು ಹೇಳುವುದು ಸಭ್ಯತೆಯಲ್ಲ. ಇದು ನಮ್ಮೆಲ್ಲರ ದೇಶ.
ನಾನು ಬರೆಯುತ್ತಿರುವುದು ಓದುಗರಿಗೆ ಮನರಂಜನೆ ನೀಡುವ ಉದ್ದೇಶದಿಂದ ಖಂಡಿತಾ ಅಲ್ಲ.
ಅಶೋಕವರ್ಧನರ ಪ್ರತಿಕ್ರಿಯೆ:
ಇಂದು ಆರಾಧನಾ ಸ್ಥಳಗಳ ವಿಪುಲತೆಯಲ್ಲಿ ಸ್ವಾಮಿಗಳು ಚರಿತ್ರೆಯನ್ನಷ್ಟೇ ಹೇಳಬಲ್ಲರು. ವರ್ತಮಾನದಲ್ಲಿ ಅದನ್ನು ರೂಢಿಸುವ ಧೈರ್ಯವಿದ್ದಿದ್ದರೆ, ತಳ ಇಲ್ಲದ ಮಾನದಲ್ಲಿ (ಸೇರಿನಲ್ಲಿ) ಭವಿಷ್ಯವನ್ನು ಅಳೆಯುವ ಶಾಸ್ತ್ರಕ್ಕೆ ಸುಮಾರು ಆರು ಎಕ್ರೆ ವ್ಯಾಪ್ತಿಯ ಪ್ರಾಕೃತಿಕ ಹಾನಿಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ.
ನನ್ನ ತಿಳುವಳಿಕೆಯಂತೆ ಇಂದು ಆರಾಧನೀಯವಾಗಿರುವ ‘ವಾಸ್ತು’ ಸಂದ ಕಾಲದ ವಿಜ್ಞಾನ, ಸಿವಿಲ್ ಇಂಜಿನಿಯರಿಂಗ್. ಆದರೆ ನಾಗರಿಕತೆಯ ಬೆಳೆವಣಿಗೆಯಲ್ಲಿ ನಮ್ಮ ಪ್ರಾಕೃತಿಕ ತಿಳುವಳಿಕೆಗಳು ಮತ್ತದಕ್ಕೆ ಸಂವಾದಿಯಾಗಿ ಉತ್ಪನ್ನಗಳು ಸಾಕಷ್ಟು ಮುಂದುವರಿದ ಕಾಲದಲ್ಲಿ ವಾಸ್ತುತಜ್ಞರ ಅನುಸರಣೆ ಗಡಿರಕ್ಷಣೆಗೆ ಬಿಲ್ಲು ಭಾಲೆಗಳನ್ನು ಹಿಡಿದು ಹೊರಟಷ್ಟೇ ಅದ್ಭುತ!

Facebook Comments Box

Related posts

ಪಂಪಭಾರತ ಆಶ್ವಾಸ ೫(5) ಪದ್ಯಗಳು ೨೦(20)ರಿಂದ ೨೯(29)

 

ಎಂಬನ್ನೆಗಂ ಸುರತಮಕರಧ್ವಜನ ಸುಭದ್ರೆಯ ವಿರಹ ಪರಿತಾಪದೊಳಾದ ಪಡೆಮಾತಂ ಕರ್ಣಪರಂಪರೆಯಿಂ ಕೇಳ್ದು ಸಂತಸಂಬಟ್ಟು ಚಕ್ರಿ ಚಕ್ರಿಕಾವರ್ತಿಯಪ್ಪುದಱಿಂದಾ ವನಾಂತರಾಳಕ್ಕೊರ್ವನೆ ಬಂದು...

ಪಂಪಭಾರತ ಆಶ್ವಾಸ ೫ ಪದ್ಯಗಳು ೧೧ರಿಂದ ೧೯

 

ವ|| ಅಂತಾಬಾಲೆ ಕಾಯ್ದ ಪುಡಿಯೊಳಗೆ ಬಿಸುಟ್ಟೆಳವಾೞೆಯಂತೆ ಸುರತ ಮಕರಧ್ವಜನೊಳಾದ ಬೇಟದೊಳ್ ಮಮ್ಮಲ ಮಱುಗುತ್ತಿರ್ದಳತ್ತ ಮನುಜ ಮನೋಜನುಂ ಮದನಪರಿತಾಪಕ್ಕಾಱದುಮ್ಮಳಿಸಿ...

ಪಂಪಭಾರತ ಆಶ್ವಾಸ ೪ ಪದ್ಯಗಳು ೧೦೮ರಿಂದ ೧೧೧

 

ವ|| ಎಂದು ತನ್ನೊಳ್ ಪಲುಂಬುತಿರ್ದನಂ ಕಂಡೀತನುಮೆಮ್ಮಂದಿಗನುಮೆಮ್ಮ ನಂಟನು ಮಕ್ಕುಮೆಂದು ಮುಗುಳ್ನಗೆ ನಗುತ್ತುಂ ಬರ್ಪನೊಂದೆಡೆಯೊಳ್-

ಎಂದು ತನ್ನೊಳ್ ಪಲುಂಬುತಿರ್ದನಂ ಕಂಡು,...

ಆಶ್ವಾಸ ೪ ಪದ್ಯಗಳು ೯೨-೯೮

ಎನುತುಂ ಬರ್ಪನ್‌ ಒಂದೆಡೆಯೊಳ್‌ ಒರ್ವಂ ಪೞಿಕೆಯ್ದ ನಲ್ಲಳನ್‌ ಉೞಿಯಲಾಱದೆ ಸುೞಿಯೆ ಮುಳಿದು ಆತನ ಕೆಳೆಯನಿಂತೆಂದಂ

ಎನ್ನುತ್ತಾ ಬರುತ್ತಿದ್ದಾಗ ಒಂದು...

ಪಂಪಭಾರತ ಆಶ್ವಾಸ ೪ (೮೭-೯೧)

 

ವ|| ಎಂಬುದುಂ ಕೇಳುತ್ತುಂ ಬರೆವರೆ ಮತ್ತಮಾ ಪೆಂಡವಾಸಗೇರಿಯೊಳಗೆ ಸೌಭಾಗ್ಯದ ಭೋಗದ ಚಾಗದ ರೂಪುಗಳ್ ಮಾನಸರೂಪಾದಂತೆ-

ಎಂಬುದುಂ ಕೇಳುತ್ತುಂ ಬರೆವರೆ...

Latest posts

ಪಂಪಭಾರತ ಆಶ್ವಾಸ ೫(5) ಪದ್ಯಗಳು ೨೦(20)ರಿಂದ ೨೯(29)

 

ಎಂಬನ್ನೆಗಂ ಸುರತಮಕರಧ್ವಜನ ಸುಭದ್ರೆಯ ವಿರಹ ಪರಿತಾಪದೊಳಾದ ಪಡೆಮಾತಂ ಕರ್ಣಪರಂಪರೆಯಿಂ ಕೇಳ್ದು ಸಂತಸಂಬಟ್ಟು ಚಕ್ರಿ ಚಕ್ರಿಕಾವರ್ತಿಯಪ್ಪುದಱಿಂದಾ ವನಾಂತರಾಳಕ್ಕೊರ್ವನೆ ಬಂದು...

ಪಂಪಭಾರತ ಆಶ್ವಾಸ ೫ ಪದ್ಯಗಳು ೧೧ರಿಂದ ೧೯

 

ವ|| ಅಂತಾಬಾಲೆ ಕಾಯ್ದ ಪುಡಿಯೊಳಗೆ ಬಿಸುಟ್ಟೆಳವಾೞೆಯಂತೆ ಸುರತ ಮಕರಧ್ವಜನೊಳಾದ ಬೇಟದೊಳ್ ಮಮ್ಮಲ ಮಱುಗುತ್ತಿರ್ದಳತ್ತ ಮನುಜ ಮನೋಜನುಂ ಮದನಪರಿತಾಪಕ್ಕಾಱದುಮ್ಮಳಿಸಿ...

ಪಂಪಭಾರತ ಆಶ್ವಾಸ ೫ ಪದ್ಯಗಳು ೧ರಿಂದ ೧೦

 

ಕಂ|| ಶ್ರೀ ವೀರಶ್ರೀ ಕೀರ್ತಿ

ಶ್ರೀ ವಾಕ್‌ಶ್ರೀಯೆಂಬ ಪೆಂಡಿರಗಲದೆ ತನ್ನೊಳ್|

ಭಾವಿಸಿದ ಪೆಂಡಿರೆನಿಸಿದ

ಸೌವಾಗ್ಯದ ಹರಿಗನೆಮ್ಮನೇನೊಲ್ದಪನೋ|| ೧||

ಶ್ರೀ, ವೀರಶ್ರೀ, ಕೀರ್ತಿಶ್ರೀ, ವಾಕ್‌ಶ್ರೀಯೆಂಬ...

ಪಂಪಭಾರತ ಆಶ್ವಾಸ ೪ ಪದ್ಯಗಳು ೧೦೮ರಿಂದ ೧೧೧

 

ವ|| ಎಂದು ತನ್ನೊಳ್ ಪಲುಂಬುತಿರ್ದನಂ ಕಂಡೀತನುಮೆಮ್ಮಂದಿಗನುಮೆಮ್ಮ ನಂಟನು ಮಕ್ಕುಮೆಂದು ಮುಗುಳ್ನಗೆ ನಗುತ್ತುಂ ಬರ್ಪನೊಂದೆಡೆಯೊಳ್-

ಎಂದು ತನ್ನೊಳ್ ಪಲುಂಬುತಿರ್ದನಂ ಕಂಡು,...

ಆಶ್ವಾಸ ೪ ಪದ್ಯಗಳು ೯೨-೯೮

ಎನುತುಂ ಬರ್ಪನ್‌ ಒಂದೆಡೆಯೊಳ್‌ ಒರ್ವಂ ಪೞಿಕೆಯ್ದ ನಲ್ಲಳನ್‌ ಉೞಿಯಲಾಱದೆ ಸುೞಿಯೆ ಮುಳಿದು ಆತನ ಕೆಳೆಯನಿಂತೆಂದಂ

ಎನ್ನುತ್ತಾ ಬರುತ್ತಿದ್ದಾಗ ಒಂದು...

Leave a Comment

Leave a Reply

Your email address will not be published. Required fields are marked *