ತನ್ನ ಶಕ್ತಿ ಗೊತ್ತಿರಲಿಲ್ಲವಂತೆ ಹನುಮಂತನಿಗೆ!

ಬಂಟ್ವಾಳ ತಾಲೂಕಿನ ಮಂಚಿ ಬಿ.ವಿ. ಕಾರಂತರ ಹುಟ್ಟೂರು. ಈ ತಿಂಗಳ ೯,೧೦,೧೧ರಂದು ಅಲ್ಲಿ ಅವರ ನೆನಪಿಗಾಗಿ ಅವರ ಅಭಿಮಾನಿಗಳೆಲ್ಲ ಸೇರಿ ಹಲವು ಕಾರ್ಯಕ್ರಮಗಳನ್ನು ನಡೆಸಿದರು. ನಾನು ಈ ಕಾರ್ಯಕ್ರಮದ ಬಗ್ಗೆ ಹೇಳಲು ಹೊರಟದ್ದಲ್ಲ. ಆ ದಿನ ಶ್ರೀಮತಿ ವೈದೇಹಿಯವರು ವ್ಯಕ್ತಪಡಿಸಿದ ಒಂದು ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಬೇಕೆನ್ನಿಸಿದ್ದರಿಂದ ಈ ಬರಹ.ವೈದೇಹಿಯವರು ಆ ದಿನ ಸಂಜೆಯ ತಮ್ಮ ಭಾಷಣದಲ್ಲಿ ಪ್ರಾಸಂಗಿಕವಾಗಿ ಒಂದು ಮಾತು ಹೇಳಿದರು: “ಎಂಜಿನಿಯರ್ ಎಂದರೆ ಮರಗಳನ್ನು ಕಡಿದು ರಸ್ತೆ ನಿರ್ಮಿಸುವವನಲ್ಲ. ಆ ಕೆಲಸವನ್ನು ಯಾವ ಕಂಟ್ರಾಕ್ಟರ್ ಕೂಡ … Read more

ಅರಣ್ಯ ಇಲಾಖೆಯ ಉತ್ತರ ಬಂತು, ಆದರೆ……

ತಾ. ೧೬-೩-೧೦ರ ನನ್ನ ಪತ್ರಕ್ಕೆ ಮಂಗಳೂರು ಉ.ಅ.ಸಂ.ಯವರು ನನಗೆ ಉತ್ತರಿಸದಿದ್ದರೂ, ತಾ. ೨೦-೩-೧೦ರಂದೇ ಅದನ್ನು ಸುಬ್ರಹ್ಮಣ್ಯ ಉಪವಿಭಾಗದ ಸ.ಅ.ಸಂ.ಯವರಿಗೆ ಕಳಿಸಿಕೊಟ್ಟಿದ್ದಾರೆ. ಎಂದರೆ ನನ್ನ ಪತ್ರ ಅವರಿಗೆ ಮುಟ್ಟಿದ ಒಂದೆರಡು ದಿನಗಳಲ್ಲಿಯೇ ಅದರ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಅವರಿಗೆ ಅಭಿನಂದನೆಗಳು.ನನ್ನ ನೆನಪೋಲೆ ಹೋದಮೇಲೆ ಅವರು ಸುಳ್ಯದ ಉ.ಸ.ಅ.ಸಂ.ಯವರಿಗೆ ಮತ್ತೊಂದು ಅರೆಸರಕಾರಿ ಪತ್ರ ಬರೆದು ನನಗೆ ಅದರ ಯಥಾಪ್ರತಿಯನ್ನು ಕಳಿಸಿಕೊಟ್ಟಿದ್ದಾರೆ. ಆ ಪತ್ರ ಹೀಗಿದೆ:………”ಮೇಲಿನ ವಿಷಯಕ್ಕೆ ಸಂಬಂಧಿಸಿ ಉಲ್ಲೇಖ(೧)ರ ಈ ಕಾರ್ಯಾಲಯದ ಪತ್ರದ ಕಡೆಗೆ ನಿಮ್ಮ ಗಮನ ಸೆಳೆಯಲಾಗಿದೆ. ಸದ್ರಿ … Read more

ತಾ. ೨-೪-೧೦ಇವೊತ್ತಿನ ಉದಯವಾಣಿಯ ವಾರ್ತೆ:ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ: ಸುಬ್ರಹ್ಮಣ್ಯ ಶ್ರೀಪ್ರಕೃತಿಯಲ್ಲಿ ಭಗವಂತನ ಶಕ್ತಿ ಅಡಗಿದೆ. ಆದುದರಿಂದಾಗಿ ನಮ್ಮ ಹಿರಿಯರು ಪ್ರಕೃತಿಯನ್ನು ಆರಾಧನೆ ಮಾಡುವುದರೊಂದಿಗೆ ಪ್ರಕೃತಿಯ ಸೊಬಗಿನ ನಡುವೆ ಆರಾಧನಾಲಯಗಳನ್ನು ನಿರ್ಮಿಸಿದರು. ನಮ್ಮದು ಪ್ರಕೃತಿಯಲ್ಲಿ ದೇವರನ್ನು ಕಾಣುವ ಸಂಸ್ಕೃತಿ ಎಂದು ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. (ವಾರ್ತೆಯಲ್ಲಿ ಅವರ ಇನ್ನೂ ಕೆಲವು ಅಭಿಪ್ರಾಯಗಳಿವೆ)ಇದೇ ವಾರ್ತೆ ಹೀಗೆ ಮುಂದುವರಿದಿದೆ:…..ವಾಸ್ತು ತಜ್ಞ ಶ್ರೀಕೃಷ್ಣ ಮಹಾಲಿಂಗ ಪ್ರಸಾದ್ ಮುನಿಯಂಗಳ ಮಾತನಾಡಿ ನಮ್ಮ ಪ್ರದೇಶದಲ್ಲಿನ ಬಹುತೇಕ ಶ್ರದ್ಧಾಕೇಂದ್ರಗಳು ಅರಣ್ಯ … Read more

ಜಾಗೆದು ಗುರ್ತೇ ಸಿಕ್ತಿಲ್ಲೆ – ಭಾಗ-೨

ಹಿಂದಿನ ಲೇಖನದಲ್ಲಿ ಮಾಹಿತಿ ಬಂದ ಕೂಡಲೇ ತಿಳಿಸುವುದಾಗಿ ಬರೆದಿದ್ದೆ. ದಿನಾಂಕ ೧೭-೩-೨೦೧೦ರಂದು ಸುಬ್ರಹ್ಮಣ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ನನಗೆ ಮಾಹಿತಿ ನೀಡಿದ್ದಾರೆ.ನಾನು ಕೇಳಿದ ಮಾಹಿತಿ ೧: ಗುಡ್ಡವನ್ನು ಸಮತಟ್ಟು ಮಾಡುವಾಗ ಅಲ್ಲಿದ್ದ ಹಲವಾರು ಮರಗಳು ನಾಶವಾಗಿರುವ ಸಾಧ್ಯತೆ ಇದೆ. ಹೀಗೆ ಮರಗಳನ್ನು ನಾಶ ಮಾಡಲು ನಿಮ್ಮ ಇಲಾಖೆ ಅನುಮತಿ ನೀಡಿದೆಯೆ?ಉತ್ತರ:ಸದ್ರಿ ಸ್ಥಳದಲ್ಲಿರುವ ಮರಮಟ್ಟುಗಳನ್ನು ಕಡಿಯಲು ಇಲಾಖಾವತಿಯಿಂದ ಯಾವುದೇ ಅನುಮತಿಯನ್ನು ನೀಡಿರುವುದಿಲ್ಲ.ನಾನು ಕೇಳಿದ ಮಾಹಿತಿ ೨: ನೀಡಿದ್ದರೆ ಅನುಮತಿಯ ಯಥಾಪ್ರತಿಯನ್ನು ನನಗೆ ನೀಡಬೇಕಾಗಿ ಕೋರುತ್ತೇನೆ.ಉತ್ತರ: ಅನುಮತಿ ನೀಡದೇ ಇರುವುದರಿಂದ … Read more

ಜಾಗೆದು ಗುರ್ತೇ ಸಿಕ್ತಿಲ್ಲೆ!

ಕಳೆದ ವರ್ಷ ಪ್ರೇಮಕ್ಕ ಮಂಗಳೂರಿನಿಂದ ನಮ್ಮಲ್ಲಿಗೆ ಬಂದಾಗ ಇವಳ ಹತ್ತಿರ “ರಾತ್ರೆ ಬೆಳ್ಗಾತ ಹೊತ್ತಿಗೆ ಗುಡ್ಡೆನೇ ಇಲ್ಲ ಮಾಡಿಬಿಡ್ತ್ರ್ಯ. ಬೆಳ್ಗಾತ ಕಂಡ್ರೆ ಜಾಗೆದು ಗುರ್ತೇ ಸಿಕ್ತಿಲ್ಲೆ, ಹಂಗಾಗಿರ್ತ್” ಅಂದಿದ್ದರು. ಜೆಸಿಬಿಗೆ ಗುಡ್ಡ, ಕಣಿವೆಗಳನ್ನು ಕಂಡರಾಗುವುದಿಲ್ಲ. ಸಾವಿರಾರು ಜೆಸಿಬಿಗಳು ದಕ್ಷಿಣ ಕನ್ನಡವನ್ನು ಬಯಲು ಸೀಮೆ ಮಾಡಲು ಹಗಲೂ ರಾತ್ರಿ ಶ್ರಮಿಸುತ್ತಿವೆ. ಗುಡ್ಡೆ ತಟ್ಟು ಮಾಡುವುದು ಸೈಟು ಮಾಡಿ ಮಾರುವುದು, ಸೈಟು ಕೊಂಡವರು ನೀರಿಗೆಂದು ಬೋರು ಹಾಕುವುದು.ದಕ್ಷಿಣ ಕನ್ನಡದ ಜೀವ ಇರುವುದೇ ಇಲ್ಲಿನ ಗುಡ್ಡಬೆಟ್ಟಗಳಲ್ಲಿ, ಸುಂದರವಾದ ಕಣಿವೆಗಳಲ್ಲಿ, ಇದನ್ನು ಯಾವ … Read more

ಕಸ ವಿಲೇವಾರಿಯ ಕಗ್ಗಂಟು

“ಆಧುನಿಕ”ವೆಂದು ಕರೆಸಿಕೊಳ್ಳುವ ಯಾವುದೇ ದೊಡ್ಡ ಊರಿಗೆ ನೀವು ಹೋಗಿ, ಇಡೀ ಊರಿನ ಗಾಳಿಯಲ್ಲಿ ಒಂದು ವಿಶಿಷ್ಟ ದುರ್ನಾತ ಹಾಸುಹೊಕ್ಕಾಗಿ ತುಂಬಿ ತುಳುಕುತ್ತಿರುತ್ತದೆ. ಈ ದುರ್ನಾತದ ಕಾಯಿಲೆ ಇತ್ತೀಚೆಗೆ ನಮ್ಮ ಬಿ.ಸಿ.ರೋಡಿನಂಥ ಸಣ್ಣ ಊರುಗಳಿಗೂ ಹಬ್ಬುತ್ತಿದೆ. ಮೊನ್ನೆ ಮೊನ್ನೆ ತಮಿಳುನಾಡಿನ ತಿರುಚ್ಚಿಗೆ ಹೋಗುವ ಪ್ರಸಂಗ ಬಂದಿತ್ತು. ಊರು ಶುರುವಾದಕೂಡಲೇ, ಇಡೀ ಊರಿನ ಎಲ್ಲರ ಮನೆಗಳಲ್ಲೂ ಏಕಕಾಲದಲ್ಲಿ ಮೂಲಂಗಿ ಹುಳಿ ಮಾಡುತ್ತಿದ್ದಾರೇನೋ ಎಂಬಂಥ ಉಸಿರು ಕಟ್ಟಿಸುವ ದುರ್ನಾತ. ಆದರೆ ಆ ಊರೊಳಗಿನ ಯಾರಿಗೂ ಈ ನಾತದ ಅರಿವೇ ಇದ್ದಂತೆ ಕಾಣಲಿಲ್ಲ! … Read more

ಮಂಗಳೂರು ವಿಶೇಷ ಆರ್ಥಿಕ ವಲಯಕ್ಕೆ ನೀರು: ಮಾಹಿತಿ ಸಂಗ್ರಹದ ಒದ್ದಾಟ-ಗುದ್ದಾಟ- ಭಾಗ ೨

ಕಾರ್ಪೋರೇಟ್ ಕಂಪೆನಿಗಳು ತಮ್ಮ ಕೆಲಸವನ್ನು ತುಂಬಾ ವ್ಯವಸ್ಥಿತವಾಗಿಯೂ, ನಿಖರವಾಗಿಯೂ ಮಾಡುತ್ತವೆ, ಖಚಿತವಾದ ಪೂರ್ವ ಲೆಕ್ಕಾಚಾರ ಇಲ್ಲದೆ ಯಾವ ವ್ಯವಹಾರಕ್ಕೂ ಮುಂದುವರಿಯುವುದಿಲ್ಲ ಎಂದೆಲ್ಲ ನಾನು ಭಾವಿಸಿದ್ದೆ. ಆದರೆ ಮಂಗಳೂರು ವಿಶೇಷ ಆರ್ಥಿಕ ವಲಯ ಕಂಪೆನಿಯು ನನ್ನ ನಂಬಿಕೆ ಬುಡಭದ್ರವಿಲ್ಲದ್ದು ಎಂದು ಸಾಧಿಸಿ ತೋರಿಸಿದೆ.ಹಿಂದಿನ ನನ್ನ ಲೇಖನದಲ್ಲಿ ಎಂ ಎಸ್ ಇ ಝಡ್ ವಿರುದ್ಧ ಮಾಹಿತಿ ಹಕ್ಕು ಆಯುಕ್ತರಿಗೆ ದೂರು ಸಲ್ಲಿಸಿದ ವಿಷಯ ಹೇಳಿದ್ದೆ. ತಾ. ೧೭-೧೨-೨೦೦೯ರಂದು ಕಂಪೆನಿ ನಾನು ಕೇಳಿದ ಮೂರು ಮಾಹಿತಿಗಳಲ್ಲಿ ಎರಡನ್ನು ಕೊಟ್ಟು, ಕೊಳಚೆ ನೀರು … Read more

ಮಂಗಳೂರು ವಿಶೇಷ ಆರ್ಥಿಕ ವಲಯಕ್ಕೆ ನೀರು: ಮಾಹಿತಿ ಸಂಗ್ರಹದ ಒದ್ದಾಟ-ಗುದ್ದಾಟ

ಈ ಕುರಿತಾದ ನನ್ನ ಮೊದಲಿನ ಲೇಖನಕ್ಕೆ ಎಂ ಎಸ್ ಇ ಝಡ್ ತಾ. ೬-೧೦-೦೯ರ ಉದಯವಾಣಿಯಲ್ಲಿ ಪ್ರಕಟಿಸಿದ ಜಾಹೀರಾತನ್ನು ಆಧಾರವಾಗಿ ಇಟ್ಟುಕೊಂಡಿದ್ದೆ. ನನ್ನ ವಿಶ್ಲೇಷಣೆಯ ದೋಷಗಳು ನನಗೆ ತಿಳಿಯುವುದಿಲ್ಲ. ಹಾಗಾಗಿ, ಕಂಪೆನಿ ಯಾವ ಅಧ್ಯಯನವನ್ನು ಆಧರಿಸಿ ಈ ಅಂಕಿ ಅಂಶಗಳನ್ನು, ಮಾಹಿತಿಯನ್ನು ಪ್ರಕಟಿಸಿದೆ ಎಂದು ತಿಳಿಯುವ ಕುತೂಹಲದಿಂದ, ಮಾಹಿತಿ ಹಕ್ಕನ್ನು ಬಳಸಿ ಎಂ ಎಸ್ ಇ ಝಡ್ ಗೆ ಅರ್ಜಿ ಹಾಕಿ ಈ ಮೂರು ಮಾಹಿತಿಗಳನ್ನು ಕೇಳಿದ್ದೆ:೧. ಮಂಗಳೂರು ಮಹಾನಗರ ಪಾಲಿಕೆಯ ಕೊಳಚೆ ನೀರು ಸಂಸ್ಕರಣಾ ಘಟಕಗಳಿಂದ … Read more

ಮಂಗಳೂರು ವಿಶೇಷ ಆರ್ಥಿಕವಲಯಕ್ಕೆ ನೀರೆಲ್ಲಿಂದ?

ಮಂಗಳೂರಿನಲ್ಲಿ ವಿಶೇಷ ಆರ್ಥಿಕವಲಯ ಸ್ಥಾಪನೆಯಾಗುತ್ತಿದೆ. ಈ ವಲಯದಲ್ಲಿ ಹಲವು ಕೈಗಾರಿಕೆಗಳು ಕಾರ್ಯಾರಂಭ ಮಾಡಲಿವೆಯಂತೆ; ಹಲವು ದೇಶೀ – ವಿದೇಶೀ ಕಂಪೆನಿಗಳು ತಳವೂರಲಿವೆಯಂತೆ; ಮಂಗಳೂರಿನ ಯುವಜನತೆಗೆ ಉದ್ಯೋಗ ನೀಡಲು ಈ ಕಂಪೆನಿಗಳು ಸ್ಪರ್ಧೆ ನಡೆಸಲಿವೆಯಂತೆ. ಇನ್ನೇನು ನಮ್ಮೂರಿನ ಯುವಜನತೆ ಯಾವ ಕೊಲ್ಲಿರಾಷ್ಟ್ರಕ್ಕೂ ಹೋಗಬೇಕಿಲ್ಲ, ಯಾವ ಅಮೆರಿಕಕ್ಕೂ ಹೋಗಬೇಕಿಲ್ಲ. ಅಷ್ಟೇಕೆ ಉದ್ಯೋಗ ಹುಡುಕಿ ಬೆಂಗಳೂರಿಗೂ ಹೋಗಬೇಕಿಲ್ಲ. ಕಾಲುಬುಡದಲ್ಲೇ ಕೇಳಿದ ಉದ್ಯೋಗ! ತಿಂಗಳಿಗೆ ಎಪ್ಪತ್ತು ಎಂಬತ್ತು ಸಾವಿರ ಸಂಬಳ ಲೆಕ್ಕಕ್ಕೇ ಅಲ್ಲವಂತೆ. ಅಷ್ಟು ಕೊಟ್ಟರೂ ಕೆಲಸಕ್ಕೆ ಜನ ಸಿಗದೆ ಹೋಗುವ ಕಾಲ … Read more

ಉಪನ್ಯಾಸಕ ವೇಷದ ಏಜೆಂಟರುಗಳು

ಬಳಕೆದಾರರ ವೇದಿಕೆಯ ಕೆಲಸವನ್ನು ನಾನು ಅಲ್ಪ ಸ್ವಲ್ಪ ಮಾಡುತ್ತೇನೆ. ಇತ್ತೀಚೆಗೆ ಗೃಹಿಣಿಯೊಬ್ಬರು ವೇದಿಕೆಗೆ ಬಂದರು. ಆಕೆ ಪರಿಚಯದವರೇ. ಇದಕ್ಕಿಂತ ಮೊದಲೂ ಒಂದು ಸಲ ಮುಕ್ತ ವಿಶ್ವವಿದ್ಯಾನಿಲಯದಿಂದ ಅಂಕಪಟ್ಟಿ ಬಂದಿಲ್ಲ ಎಂಬ ಸಮಸ್ಯೆಯ ಪರಿಹಾರಕ್ಕಾಗಿ ಬಂದಿದ್ದರು. ಇಂದೂ ಬರುವ ಮೊದಲೇ ಫೋನಿಸಿದ್ದರು. ಹಾಗಾಗಿ ಆಕೆ ಬರುತ್ತಿರುವುದು ಯಾಕೆಂದು ನನಗೆ ಸ್ವಲ್ಪ ಮಟ್ಟಿಗೆ ಅಂದಾಜಿತ್ತು.ಆಕೆ ಎರಡು ಚಿಕ್ಕ ಮಕ್ಕಳ ತಾಯಿ. ಮೊದಲನೆಯ ಹೆಣ್ಣು ಮಗುವಿಗೆ ಈಗ ನಾಲ್ಕು ವರ್ಷ. ಎರಡನೆಯದು ತುಂಬಾ ಚಿಕ್ಕದು.ಆಕೆಯ ಪತಿ ನನಗೆ ಪರಿಚಯದವರೇ. ಅವರಿಗೆ ಪಿತ್ರಾರ್ಜಿತವಾಗಿ … Read more