ಎಸ್ ಇ ಜಡ್ ಕಂಪೆನಿ ಹೈಕೋರ್ಟಿಗೆ ಹೋದದ್ದರ ಒಳಗುಟ್ಟೇನು?
“ಮಂಗಳೂರು ಎಸ್ ಇ ಜಡ್ ಕಂಪೆನಿ ಮಾಹಿತಿ ಹಕ್ಕಿನ ವ್ಯಾಪ್ತಿಗೆ ಬರುತ್ತದೆ” ಎಂದು ಕರ್ನಾಟಕ ಮಾಹಿತಿ ಆಯೋಗ ನೀಡಿದ ತೀರ್ಪನ್ನು ಪ್ರಶ್ನಿಸಿ ಕಂಪೆನಿ ಹೈಕೋರ್ಟಿಗೆ ಹೋಗಿದೆಯಷ್ಟೆ? ಇದರ ಒಳಗುಟ್ಟೇನು?ಕೆಲವು ಸಮಯದಿಂದಲೂ ವಿದ್ಯಾ ಮೇಡಂ (ವಿದ್ಯಾ ದಿನಕರ್) “ಏನೋ ಗುಟ್ಟು ಇರಬೇಕು” ಎಂದು ಅನುಮಾನಿಸುತ್ತಲೇ ಇದ್ದರು. ಕಂಪೆನಿ ಹೈಕೋರ್ಟಿಗೆ ಹೋದರೂ ಹೋಗಬಹುದು ಎಂಬ ಅನುಮಾನ, ಆಯೋಗ ನಿರ್ದೇಶಿಸಿದ ಅವಧಿದೊಳಗೆ ಮಾಹಿತಿ ಸಿಗದಿದ್ದಾಗ, ನನಗೂ ಬಂದಿತ್ತು.ನಾನು ಕೇಳಿದ ಮಾಹಿತಿ ನೀರಿಗೆ ಸಂಬಂಧಿಸಿದ್ದು. ಬಂಟ್ವಾಳ ತಾ. ಶಂಬೂರಿನಲ್ಲಿ ನೇತ್ರಾವತಿ ನದಿಗೆ ಅಣೆಕಟ್ಟು … Read more